ಮಂಗಳೂರು: ಸ್ವಿಮ್ಮಿಂಗ್ ಫೆಡರೇಶನ್ ಆಫ್ ಇಂಡಿಯಾ ಹಾಗೂ ಇತರರ ಸಹಯೋಗದಲ್ಲಿ ಆಯೋಜಿಸಲಾಗಿರುವ 17ನೇ ರಾಷ್ಟ್ರೀಯ ಮಾಸ್ಟರ್ಸ್ ಈಜು ಸ್ಪರ್ಧೆಗೆ ಇಂದು ನಗರದ ಸೈಂಟ್ ಅಲೋಶಿಯಸ್ ಕಾಲೇಜಿನ ಈಜುಕೊಳದಲ್ಲಿ ಚಾಲನೆ ನೀಡಲಾಯಿತು.
ದೇಶದ ವಿವಿಧ ರಾಜ್ಯಗಳ ಈಜು ಸ್ಪರ್ಧಿಗಳು ಈ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ್ದಾರೆ. 25ರ ಹರೆಯದಿಂದ 85ಕ್ಕೂ ಮೇಲ್ಪಟ್ಟ ಹರೆಯದ 670ಕ್ಕೂ ಅಧಿಕ ಮಹಿಳಾ ಹಾಗೂ ಪುರುಷ ಸ್ಪರ್ಧಿಗಳು ಉತ್ಸಾಹದಿಂದ ಭಾಗವಹಿಸಿದರು.
ನ.26ರಿಂದ 28ರ ವರೆಗೆ ಈಜು ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಮೂರು ಸ್ಪರ್ಧಿಗಳಿಗೆ ಮೆಡಲ್ ಹಾಗೂ ಸರ್ಟಿಫಿಕೇಟ್ ನೀಡಿ ಗೌರವಿಸಲಾಗುತ್ತದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಈಜಾಳುಗಳು ಆಗಮಿಸಿದ್ದಾರೆ.
Kshetra Samachara
26/11/2021 07:55 pm