ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಡಿ.25 ರಂದು ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ 'ಅಟಲ್ ಟ್ರೋಫಿ'

ಉಡುಪಿ: ಭಾರತೀಯ ಜನತಾ ಪಾರ್ಟಿ, ಯುವ ಮೋರ್ಚಾ ಹಾಗೂ ವಾಲಿಬಾಲ್ ಫ್ರೆಂಡ್ಸ್ ಹನುಮಂತನಗರ ಆಶ್ರಯದಲ್ಲಿ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ "ಅಟಲ್ ಟ್ರೋಫಿ" ನಡೆಯಲಿದೆ.

ಡಿ.25 ರಂದು ಸಿಲಸ್ ಇಂಟರ್ ನ್ಯಾಷನಲ್ ಸ್ಕೂಲ್ ಮೈದಾನದಲ್ಲಿ ಈ ಪಂದ್ಯಾವಳಿ ನಡೆಯಲಿದೆ. ಸಂಸದ, ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಉದ್ಘಾಟಿಸಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶಾಸಕ ಕೆ. ರಘುಪತಿ ಭಟ್ ಮನವಿ ಮಾಡಿದ್ದಾರೆ.

Edited By : Shivu K
Kshetra Samachara

Kshetra Samachara

21/12/2021 01:04 pm

Cinque Terre

10.83 K

Cinque Terre

0

ಸಂಬಂಧಿತ ಸುದ್ದಿ