ಮೂಡಬಿದಿರೆ: ಮೂಡಬಿದಿರೆಯ ಸ್ವರಾಜ್ ಮೈದಾನದಲ್ಲಿ ನಾಲ್ಕು ದಿನಗಳ ಕಾಲ ನಡೆಯುವ 81ನೇ ಅಖಿಲ ಭಾರತ ಅಂತರ್ ವಿವಿ ಪುರುಷರ ಅಥ್ಲೇಟಿಕ್ ಕ್ರೀಡಾಕೂಟ ಆರಂಭಗೊಂಡಿದೆ.
ಉದ್ಘಾಟನೆಗೆ ಮೊದಲು ಸಂಜೆ ಸ್ವರಾಜ್ ಮೈದಾನದ ಸಿಂಥೆಟಿಕ್ ಟ್ರ್ಯಾಕ್ ನಲ್ಲಿ ದೇಶಾದ್ಯಂತ ವಿವಿಧ ೨೪೮ ವಿಶ್ವವಿದ್ಯಾನಿಲಯಗಳ ಅಥ್ಲೀಟ್‌ಗಳು ಆಕರ್ಷಕ ಪಥಸಂಚಲನ ನಡೆಸಿದರು. ಇದೇ ವೇಳೆ ದೇಶದ ವಿವಿಧ ಕಲೆ ಸಾಂಸ್ಕೃತಿಕಯನ್ನು ಬಿಂಬಿಸುವ ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದವು.
ಕ್ರೀಡಾಕೂಟವನ್ನು ಕರ್ನಾಟಕ ಸರ್ಕಾರ ಯುವಜನ ಸಬಲೀಕರಣ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ ಉದ್ಘಾಟಿಸಿದರು ಮೆರವಣಿಗೆಯ ಮೆರುಗು ಹೆಚ್ಚಿಸಲು ಸುಡುಮದ್ದಿನ ಪ್ರದರ್ಶನ ವಿಶೇಷವಾಗಿತ್ತು.ಮೊದಲ ದಿನದ ಕ್ರೀಡಾಕೂಟದ ೧೦.೦೦೦ಮೀ ಒಟದ ವಿಜೇತರನ್ನು ಅಭಿನಂದಿಸಲಾಯಿತು. ಮಂಗಳೂರು ವಿವಿ ಉಪಕುಲಪತಿ ಡಾ. ಸುಬ್ರಮಣ್ಯ ಎಡಪಡಿತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಸೋಸಿಯೇಷನ್ ಆಫ್ ಇಂಡಿಯಾ ಯೂನಿವರ್ಸಿಟಿ ಜಂಟಿ ಕಾರ್ಯದರ್ಶಿ ಡಾಕ್ಟರ್ ಬಲ್ಜಿತ್ ಸಿಂಗ್ ಸೋಖನ್ ಧ್ವಜಾರೋಹಣ ನೆರವೇರಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್, ಕನ್ನಡ ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್, ಮುಲ್ಕಿ-ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್, ವಿಶೇಷ ಆಹ್ವಾನಿತರಾಗಿ ಅಸೋಸಿಯೇಷನ್ ಆಫ್ ಇಂಡಿಯಾ ಯೂನಿವರ್ಸಿಟಿ ಆಯ್ಕೆ ಸಮಿತಿ ಅಧ್ಯಕ್ಷ ಡಾ ಬಿನು ಜಾಜ್೯ ವರ್ಗೀಸ್, ಅದಾನಿ ಗ್ರೂಪ್‌ನ ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಅಳ್ವ ಸೇರಿದಂತೆ ಹಲವು ಮಂದಿ ಗಣ್ಯರು ಉಪಸ್ಥಿತರಿದ್ದರು.
Kshetra Samachara
05/01/2022 08:20 am