ಮೂಡಬಿದ್ರೆ: ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ಸ್ವರಾಜ್ ಮೈದಾನದಲ್ಲಿ ಆರಂಭಗೊಂಡಿರುವ ೮೧ನೇ ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ಪುರುಷರ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಕ್ರೀಡಾಕೂಟವನ್ನು ಕ್ರೀಡಾ ಸಚಿವ ನಾರಾಯಣ ಗೌಡ ಉದ್ಘಾಟಿಸಿದರು.
ನಂತರ ಮಾತನಾಡಿದ ನಾರಾಯಣ ಗೌಡ, ನನ್ನ ಅಧಿಕಾರಾವಧಿಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದ ಕ್ರೀಡಾ ಕಾರ್ಯಕ್ರಮ ಮೊದಲ ಬಾರಿಗೆ ವೀಕ್ಷಿಸುತ್ತಿರುವುದು ಖುಷಿ ತಂದುಕೊಟ್ಟಿದೆ. ಕ್ರೀಡಾ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ಸರ್ಕಾರ, ಮುಂಚೂಣಿಯಲ್ಲಿದೆ. ರಾಜ್ಯಾದ್ಯಂತ 75 ಕ್ರೀಡಾರ್ಥಿಗಳನ್ನು ದತ್ತು ಪಡೆದು ತರಬೇತಿ ನೀಡಿ ಒಲಿಂಪಿಕ್ ಕ್ರೀಡಾಕೂಟಕ್ಕೆ ಸಜ್ಜುಗೊಳಿಸುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಇದೇ ವೇಳೆ ಕ್ರೀಡಾಕೂಟಕ್ಕೆ ರಾಜ್ಯ ಸರ್ಕಾರದಿಂದ 5 ಲಕ್ಷ ಅನುದಾನ ನೀಡುವುದಾಗಿ ಘೋಷಿಸಿದರು.
Kshetra Samachara
05/01/2022 08:56 am