ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ : ತಾ.ಮಟ್ಟದ ಪುರುಷರ ವಿಭಾಗದ ವಾಲಿಬಾಲ್, ಥ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

ಮೂಡುಬಿದಿರೆ : ಇಲ್ಲಿನ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಇವುಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಪುರುಷರ ವಿಭಾಗದ ವಾಲಿಬಾಲ್ ಮತ್ತು ಮಹಿಳೆಯರ ವಿಭಾಗದ ಥ್ರೋಬಾಲ್ ಪಂದ್ಯಾಟವು ರೋಟರಿ ಇಂಗ್ಲೀಷ್ ಮಾಧ್ಯಮ ಶಾಲೆಯ ಆವರಣದಲ್ಲಿ ನಡೆಯಿತು.

ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಉಮಾನಾಥ ಕೋಟ್ಯಾನ್, ಕ್ರೀಡೆಗಳಲ್ಲಿ ಸಾಧನೆ ಮಾಡುವವರು ತುಂಬಾ ಜನ ಇರುತ್ತಾರೆ ಆದರೆ ಅವರಿಗೆ ಬೆಂಬಲ ನೀಡುವವರು, ಶಕ್ತಿ ತುಂಬುವವರು ಯಾರೂ ಇಲ್ಲದಿರುವುದರಿಂದ ಅಸಹಾಯಕ ಸ್ಥಿತಿಯಲ್ಲಿರುತ್ತಾರೆ ಇಂತಹವರನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡುವಂತಹ ಕೆಲಸ ಈ ಅಸೋಸಿಯೇಷನ್‌ ನಿಂದಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿತಾಲೂಕು ವಾಲಿಬಾಲ್ ಅಸೋಸಿಯೇಷನ್‌ನ ಗೌರವಾಧ್ಯಕ್ಷರಾಗಿರುವ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮೊದಲ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ವಿನಯ್ ಆಳ್ವ ಅವರನ್ನು ಸನ್ಮಾನಿಸಲಾಯಿತು.

Edited By : Nagesh Gaonkar
Kshetra Samachara

Kshetra Samachara

14/02/2022 04:57 pm

Cinque Terre

12.1 K

Cinque Terre

0

ಸಂಬಂಧಿತ ಸುದ್ದಿ