ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಸ್ ಸಹಯೋಗದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್ ನಡೆಯಿತು.
ಮಹಿಳಾ ಹಾಗೂ ಪುರುಷರ ವಿಭಾಗದಲ್ಲಿ ಆತಿಥೇಯ ಮಂಗಳೂರು ವಿವಿ ರನ್ನರ್ ಅಪ್ ಆಗುವ ಮೂಲಕ ವಿಶೇಷ ಸಾಧನೆ ಮೆರೆದರು. ಗುರುವಾರ ಬೆಳಿಗ್ಗೆ 6 ಗಂಟೆಗೆ ನಿಶ್ಮಿತಾ ಟವರ್ಸ್ ಬಳಿ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಓಟಕ್ಕೆ ಚಾಲನೆ ನೀಡಿದರು. ಆಳ್ವಾಸ್ ಸಂಸ್ಥೆಗಳ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ, ಮಾಜಿ ಸಚಿವ ಅಭಯಚಂದ್ರ ಜೈನ್ ಉಪಸ್ಥಿತರಿದ್ದರು. ದೇಶದಾದ್ಯಂತ 200 ವಿವಿಗಳ 2000 ಅಥ್ಲೀಟ್ಗಳು ಓಟದಲ್ಲಿ ಭಾಗವಹಿಸಿದ್ದರು.
ಪುರುಷರ ವಿಭಾಗದಲ್ಲಿ ಮಹರ್ಷಿ ದಯಾನಂದ ಯುನಿವರ್ಸಿಟಿ 18 ಅಂಕಗಳೊಂದಿಗೆ ಪ್ರಥಮ, ಆತಿಥೇಯ ಮಂಗಳೂರು ವಿಶ್ವವಿದ್ಯಾನಿಲಯ 54 ಅಂಕಗಳೊಂದಿಗೆ ದ್ವಿತೀಯ ಸ್ಥಾನ, 68 ಅಂಕಗಳೊಂದಿಗೆ ಕೊಲ್ಹಾಪುರದ ಶಿವಾಜಿ ಯುನಿವರ್ಸಿಟಿ ತೃತೀಯ, ಪುಣೆಯ ಸಾವಿತ್ರಿಬಾಯಿ ಪುಲೆ ಯುನಿವರ್ಸಿಟಿ 80 ಅಂಕಗಳೊಂದಿಗೆ ಚತುರ್ಥ ಸ್ಥಾನ ಗಳಿಸಿತು.
ಮಹಿಳಾ ವಿಭಾಗದಲ್ಲಿ ಮಹರ್ಷಿ ದಯಾನಂದ ಯುನಿವರ್ಸಿಟಿ 30 ಅಂಕಗಳೊಂದಿಗೆ ಪ್ರಥಮ, 36 ಅಂಕಗಳೊಂದಿಗೆ ಮಂಗಳೂರು ವಿವಿ ದ್ವಿತೀಯ, ಕೋಲ್ಹಾಪುರದ ಶಿವಾಜಿ ಯುನಿವರ್ಸಿಟಿ 80 ಅಂಕಗಳೊಂದಿಗೆ ತೃತೀಯ, ಕೊಟ್ಟಾಯಂನ ಮಹಾತ್ಮ ಗಾಂಧಿ ಯುನಿವರ್ಸಿಟಿ 99 ಅಂಕಗಳೊಂದಿಗೆ ಚತುರ್ಥ ಸ್ಥಾನ ಪಡೆಯಿತು.
ಪುರುಷರ ವೈಯಕ್ತಿಕ ವಿಭಾಗದಲ್ಲಿ ಉತ್ತರಪ್ರದೇಶದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ಯುನಿವರ್ಸಿಟಿ ರಾಮ್ ವಿನೋದ್ ಯಾದವ್ (ಕಾಲ: 31ನಿ 28ಸೆ) ಪ್ರಥಮ, ರೋಥಕ್ ನ ಮಹರ್ಷಿ ದಯಾನಂದ ಯುನಿವರ್ಸಿಟಿ ಶುಭಂ ಸಿಂದು (ಕಾಲ: 31ನಿ 29ಸೆ) ದ್ವಿತೀಯ, ಜನನಾಯಕ್ ಚಂದ್ರಶೇಖರ್ ಯೂನಿವರ್ಸಿಟಿಯ ಆರಿಫ್ ಅಲಿ (ಕಾಲ: 31ನಿ 45ಸೆ) ತೃತೀಯ ಸ್ಥಾನ ಪಡೆದರು.
ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಮಹರ್ಷಿ ದಯಾನಂದ ವಿವಿಯ ಬಾದೋ (ಕಾಲ: 35ನಿ 35ಸೆ) ಪ್ರಥಮ, ಮಂಗಳೂರು ವಿವಿಯ ಕೆ. ಎಂ. ಲಕ್ಷ್ಮೀ (ಕಾಲ: 36ನಿ 10ಸೆ) ದ್ವಿತೀಯ, ಮಹರ್ಷಿ ದಯಾನಂದ ವಿವಿಯ ಭಾರತಿ (ಕಾಲ: 37ನಿ 23ಸೆ) ತೃತೀಯ ಸ್ಥಾನ ಪಡೆದರು.
ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿವಿ ರಿಜಿಸ್ಟ್ರಾರ್ ಡಾ. ಕಿಶೋರ್ ಕುಮಾರ್ ಸಿ. ಕೆ, ದೈಹಿಕ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜ, ಮೂಡುಬಿದಿರೆ ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಉಪಸ್ಥಿತರಿದ್ದರು. ದೈಹಿಕ ನಿರ್ದೇಶಕ ಪ್ರವೀಣ್ ಕುಮಾರ್ ವಿಜೇತರ ಪಟ್ಟಿ ವಿವರಿಸಿದರು, ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಾಜೇಶ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.
Kshetra Samachara
10/03/2022 06:22 pm