ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ವಾಲಿ ಬಾಲ್ ಅಸೋಸಿಯೇಷನ್ ಪುತ್ತೂರು ತಾಲೂಕು, ವಾಲಿಬಾಲ್ ಅಸೋಸಿಯೇಷನ್ ಹಾಗೂ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು, ವಿದ್ಯಾಗಂಗೋತ್ರಿ ಸವಣೂರು, ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಮೂರು ದಿನಗಳ ಹೊನಲು ಬೆಳಕಿನ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ವಿದ್ಯಾರಶ್ಮಿ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.
ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟದ ಆಯ್ದು ಯೂನಿವರ್ಸಿಟಿಯ ಪುರುಷರ ಆರು ತಂಡ ಹಾಗೂ ಆಹ್ವಾನಿತ ಮಹಿಳೆಯರ ನಾಲ್ಕು ತಂಡಗಳ ಭಾಗವಹಿಸಲಿವೆ.
ಕ್ರೀಡಾಂಗಣದ ಉದ್ಘಾಟನೆಯನ್ನು ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ನೆರವೇರಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಾಂದೀಪನಿ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಭಾಸ್ಕರ್ ಆಚಾರ್ಯ ಹಿಂದಾರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳು ವಿದ್ಯಾಗಂಗೋತ್ರಿ ಸವಣೂರು, ಸಂಚಾಲಕರಾದ ಕೆ. ಸೀತಾರಾಮ ರೈ ಸವಣೂರು ವಹಿಸಿದ್ದರು.
ಇದೇ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಹರೇಕಳ ಹಾಜಬ್ಬ ಹಾಗೂ ಮಹಾಲಿಂಗ ನಾಯ್ಕ ಅಮೈ ಅವರನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯಿತು.
Kshetra Samachara
12/03/2022 01:22 pm