ಮೂಡುಬಿದಿರೆ: ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಮೇ 8 ರಿಂದ 9 ರವರೆಗೆ ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡಿನಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ ಸೀನಿಯರ್ ಮತ್ತು 20 ವರ್ಷದೊಳಗಿನ ಪುರುಷರ ಮತ್ತು ಮಹಿಳೆಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಟೋಟ್ಸ್ ಕ್ಲಬ್, ಮೂಡುಬಿದಿರೆ ಒಟ್ಟು 10 ಚಿನ್ನ, 12 ಬೆಳ್ಳಿ ಹಾಗೂ 7 ಕಂಚಿನ ಪದಕಗಳನ್ನು ಪಡೆದು ಒಟ್ಟು 29 ಪದಕವನ್ನು ತನ್ನದಾಗಿಸಿಕೊಂಡಿದೆ. ಮತ್ತು 20 ವರ್ಷದೊಳಗಿನ ಬಾಲಕಿಯರು ಹಾಗೂ ಸೀನಿಯರ್ ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿರುತ್ತದೆ.
ಈ ಕ್ರೀಡಾಕೂಟದ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿಯನ್ನು ಮಹಿಳಾ ವಿಭಾಗದಲ್ಲಿ ಲಿಖಿತಾ ಎಂ ಮತ್ತು ಪುರುಷರ ವಿಭಾಗದಲ್ಲಿ ಮಿಜೋ ಚಾಕೋ ಕುರಿಯನ್ ಪಡೆದು ಆಳ್ವಾಸ್‌ಗೆ ಕೀರ್ತಿ ತಂದಿರುತ್ತಾರೆ. ವಿಜೇತ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.
Kshetra Samachara
28/05/2022 10:53 pm