ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು: ಕ್ರೀಡೆಯಿಂದ ದೈಹಿಕ, ಮಾನಸಿಕ ಕ್ಷಮತೆ ವೃದ್ಧಿ; ಲಕ್ಷ್ಮಣ ಸಾಲ್ಯಾನ್

ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್, ನ ವಾರ್ಷಿಕ ಕ್ರೀಡಾ ಕೂಟ ತೋಕೂರು ಸರಕಾರಿ ಹಿರಿಯ ಪ್ರಾಥಮಿಕ ಹಿಂದುಸ್ಥಾನಿ ಶಾಲೆಯ ಮೈದಾನದಲ್ಲಿ ನಡೆಯಿತು.

ಕ್ರೀಡಾಕೂಟವನ್ನು ಸಂಸ್ಥೆಯ ಸಭಾಂಗಣದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮುಲ್ಕಿ ಶಾಖೆಯ ಅಖಿಲ ಭಾರತ ವಿಮಾ ಪ್ರತಿನಿಧಿಗಳ ಸಂಘಟನೆಯ ಅಧ್ಯಕ್ಷ ಲಕ್ಷ್ಮಣ ಸಾಲ್ಯಾನ್ ಕೆರೆಕಾಡು ಮಾತನಾಡಿ, "ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರೆ ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ಶಂಕರ್ ಶೆಟ್ಟಿಗಾರ್ ವಹಿಸಿ ಮಾತನಾಡಿದರು. ಸ್ಪೋರ್ಟ್ಸ್ ಕ್ಲಬ್‌ನ ಗೌರವ ಅಧ್ಯಕ್ಷ ಮೋಹನ್ ದಾಸ್, ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಸಂತೋಷ್ ದೇವಾಡಿಗ ಮತ್ತು ಮಹಿಳಾ ಕಾರ್ಯಾಧ್ಯಕ್ಷೆ ಶೋಭಾ. ವಿ.ಅಂಚನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೋಶಾಧಿಕಾರಿ ಸಂಪತ್ ದೇವಾಡಿಗ ವಂದಿಸಿದರು. ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿವಿಧ ಕ್ರೀಡಾಕೂಟಗಳು ನಡೆಯಿತು

Edited By : PublicNext Desk
Kshetra Samachara

Kshetra Samachara

30/05/2022 04:18 pm

Cinque Terre

1.31 K

Cinque Terre

0

ಸಂಬಂಧಿತ ಸುದ್ದಿ