ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ರಾಷ್ಟ್ರಮಟ್ಟದ ನಾಗರಿಕಾ ಸೇವಾ ನೌಕರರ ಕ್ರೀಡಾಕೂಟಕ್ಕೆ ಆಯ್ಕೆ

ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ(ರಿ.) ಬೆಂಗಳೂರು ಇವರ ಸಹಯೋಗದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮಂಗಳೂರು ದಕ್ಷಿಣ ವಲಯದ ಸರ್ಕಾರಿ ಪ್ರೌಢಶಾಲೆ, ಅತ್ತಾವರದ ಸಹಶಿಕ್ಷಕಿ ಶ್ರೀಮತಿ ವೀಣಾ ಉತ್ತಮ ಸಾಧನೆ ಮಾಡಿದ್ದಾರೆ.

ಅವರು ಕ್ರೀಡಾಕೂಟದ ಈಜುಸ್ಪರ್ಧೆಯಲ್ಲಿ 50 ಮೀ. ಬ್ರೆಸ್ಟ್ ಸ್ಟ್ರೋಕ್,50 ಮೀ. ಫ್ರೀ ಸ್ಟೈಲ್,50 ಮೀ ಬ್ಯಾಕ್ ಸ್ಟ್ರೋಕ್‌ನಲ್ಲಿ ದ್ವಿತೀಯ ಸ್ಥಾನ ಹಾಗೂ ಮೂರು ಬೆಳ್ಳಿ ಪದಕ ಪಡೆದು ಸತತ ಎರಡನೆಯ ಬಾರಿ ರಾಷ್ಟ್ರಮಟ್ಟದ ನಾಗರಿಕ ಸೇವಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮಂಗಳೂರಿನ ಈಜು ತರಬೇತುದಾರ ಬಿ.ಕೆ.ನಾಯ್ಕ್ ಅವರು ತರಬೇತಿ ನೀಡಿರುತ್ತಾರೆ.

Edited By : PublicNext Desk
Kshetra Samachara

Kshetra Samachara

10/06/2022 11:10 am

Cinque Terre

2.32 K

Cinque Terre

0

ಸಂಬಂಧಿತ ಸುದ್ದಿ