ಉಡುಪಿ: ತನ್ನ ಬೈಲಾ ಹಾಗೂ ಕೇಂದ್ರ ಸರಕಾರದ ಕ್ರೀಡಾ ನೀತಿಗೆ ವಿರುದ್ಧವಾಗಿರುವ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ಅಫೀಲಿಯೇಶನ್‌ನನ್ನು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ ರದ್ದುಪಡಿಸಿದೆ ಎಂದು ಕರ್ನಾಟಕ ಸ್ಟೇಟ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾದ ರಾಷ್ಟ್ರಾಧ್ಯಕ್ಷ ಹಿಮಂತ ಬಿಸ್ವಾ ಶರ್ಮಾ ಅವರನ್ನು ಭೇಟಿಯಾಗಿ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನ ನ್ಯೂನ್ಯತೆಗಳ ಬಗ್ಗೆ ಮನವರಿಕೆ ಮಾಡಲಾಗಿತ್ತು. ಬಳಿಕ ಅಧಿಕಾರಿಗಳೊಂದಿಗೆ
ಸಮಾಲೋಚನೆ ನಡೆಸಿ ಪೂರಕ ದಾಖಲೆಗಳನ್ನು ಒದಗಿಸಲಾಗಿತ್ತು. ಅದರಂತೆ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ಕರ್ನಾಟಕ ರಾಜ್ಯದ ಅಫೀಲಿಯೇಶನ್ ನ್ನು ರದ್ದುಪಡಿಸಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಶನ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾದ ಬೈಲಾವನ್ನು ಪಾಲಿಸುತ್ತಿರಲಿಲ್ಲ ಮತ್ತು ಬೈಲಾವನ್ನು ಪರಿಷ್ಕರಿಸಿರುವುದರಿಂದ ಜಿಲ್ಲಾಮಟ್ಟದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಗೆ ಹಿನ್ನೆಡೆ ಆಗಿತ್ತು. ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್‌ಗಳಿಗೆ ಬ್ಯಾಡ್ಮಿಂಟನ್ ಕ್ರೀಡೆಯನ್ನು ಉತ್ತೇಜಿಸಲು ಅನುಕೂಲ ಮಾಡಿಕೊಡಲು ಹಾಗೂ ಎಲ್ಲಾ ಜಿಲ್ಲೆಗಳ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ವಿಫುಲ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಡೆಸಿದ ಸಂಘಟಿತ ಹೋರಾಟಕ್ಕೆ ಇದೀಗ ಜಯ ದೊರೆತಿದೆ ಎಂದು ಅವರು ತಿಳಿಸಿದ್ದಾರೆ.
Kshetra Samachara
14/07/2022 08:36 pm