ಮೂಡಬಿದಿರೆ: ಎಕ್ಸಲೆಂಟ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಎಕ್ಸಲೆಂಟ್ ವಿದ್ಯಾಸಂಸ್ಥೆಗಳು ಕಲ್ಲಬೆಟ್ಟು ಇವರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳ ಟೇಬಲ್ ಟೆನ್ನಿಸ್ ಹಾಗೂ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟಗಳು ನಡೆದವು.
ಪಂದ್ಯಾಟವನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿತಾ ಜೈನ್ ಉದ್ಘಾಟಿಸಿ ಸ್ಪರ್ಧಿಗಳಿಗೆ ಶುಭ ಕೋರಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಮೂಡಬಿದಿರೆ ತಾಲೂಕಿನ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀಮತಿ ರಾಜಶ್ರೀಯವರು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಂದು ಆಟಗಾರರಿಗೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಆಟದಲ್ಲಿ ಒಳ್ಳೆತನವಿರಲಿ, ಸೋಲು ಗೆಲುವಿನಲ್ಲಿ ಖುಷಿ ಇರಲಿ ಎಂದು ತಮ್ಮ ಅಧ್ಯಕ್ಷೀಯ ನುಡಿಗಳನ್ನು ಹಂಚಿಕೊಂಡರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ನಿತ್ಯಾನಂದ ಶೆಟ್ಟಿ ಪ್ರಾಸ್ತಾವಿಕವಾಗಿ ನುಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಶಿವಾನಂದ ಕಾಯ್ಕಿಣಿ, ರಾಜ್ಯ ಸರ್ಕಾರಿ ನೌಕರರ ಸಂಘ ಮೂಡಬಿದಿರೆ ತಾಲೂಕು ಅಧ್ಯಕ್ಷರಾದ ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಸ್ವಾಗತಿಸಿದರು. ದೈಹಿಕ ಶಿಕ್ಷರಾದ ರಾಜ್ ಪ್ರಸಾದ್ ವಂದಿಸಿದರು. ಅಧ್ಯಾಪಕ ರೇಣುಕಾಚಾರ್ಯ ಕಾರ್ಯಕ್ರಮ ನಿರೂಪಿಸಿದರು.
Kshetra Samachara
15/07/2022 04:01 pm