ಮಂಗಳೂರು: ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ಸ್-2022 ವೆಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿ ಭಾರತದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿ ತವರು ನೆಲಕ್ಕೆ ಆಗಮಿಸಿರುವ ಕುಂದಾಪುರದ ಗುರುರಾಜ್ ಪೂಜಾರಿಯವರನ್ನು ರವಿವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಈ ವೇಳೆ ಗುರುರಾಜ್ ಪೂಜಾರಿಯವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಶಾಸಕರಾದ ಡಾ.ಭರತ್ ಶೆಟ್ಟಿ , ಉಮಾನಾಥ ಕೋಟ್ಯಾನ್ ಆತ್ಮೀಯವಾಗಿ ಅಭಿನಂದಿಸಿ ಶುಭ ಕೋರಿದರು.
ಕಾಮನ್ ವೆಲ್ತ್ ಗೇಮ್ಸ್-2022 ರಲ್ಲಿ ವೇಯ್ಟ್ ಲಿಫ್ಟ್ ನಲ್ಲಿ 61ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಗುರುರಾಜ್ ಸತತ ಎರಡನೇ ಬಾರಿಗೆ ಪ್ರತಿಷ್ಠಿತ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಪಾಲ್ಗೊಂಡಿದ್ದಾರೆ. ಕಳೆದ ಬಾರಿ ಪುರುಷರ 56 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿರುವ ಪೂಜಾರಿ ಗುರುರಾಜ್ ಒಟ್ಟು 249 ಕೆಜಿ (111 + 138) ಭಾರ ಎತ್ತಿ ಬೆಳ್ಳಿಯ ಪದಕ ಗೆದ್ದಿದ್ದರು.
Kshetra Samachara
07/08/2022 04:36 pm