ಮುಲ್ಕಿ:ಕರ್ನಾಟಕ ಸರಕಾರ,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದ ಕ ಜಿಲ್ಲೆ ಆಶ್ರಯದಲ್ಲಿ ಬೆಳ್ತಂಗಡಿಯ ಹಳೆಕೋಟೆ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ 2022 23 ನೇ ಸಾಲಿನ ಆಟೋಟ ಸ್ಪರ್ಧೆ ಯಲ್ಲಿ 17ರ ವಯೋಮಿತಿಯ 48-52 ಕೆ.ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ತೃಶಾ ಅಮೀನ್ ಇವರು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.
ತೃಶಾ ಅಮೀನ್ ಹಳೆಯಂಗಡಿಯ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ನ ಕರಾಟೆ ತರಗತಿಯ ವಿದ್ಯಾರ್ಥಿನಿ ಹಾಗೂ ಮುಲ್ಕಿಯ ಕಿಲ್ಪಾಡಿ ಶ್ರೀ ವ್ಯಾಸ ಮಹರ್ಷಿ ವಿದ್ಯಾ ಪೀಠದ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ತೋಕೂರು ಸುಭಾಷ್ ಅಮೀನ್ ಮತ್ತು ಶ್ರೀಮತಿ ಜಯಲಕ್ಷ್ಮಿ ಎಸ್.ಅಮೀನ್ ರವರ ಪುತ್ರಿಯಾಗಿರುತ್ತಾರೆ.
Kshetra Samachara
08/08/2022 07:31 am