ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕಾಮನ್ ವೆಲ್ತ್ ಪದಕವೀರನಿಗೆ ಜಿಲ್ಲಾಢಳಿತದಿಂದ ಅಭಿನಂದನೆ, ಗೌರವ

ಉಡುಪಿ:ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ ಪಡೆದ ಜಿಲ್ಲೆಯ ಗುರುರಾಜ ಪೂಜಾರಿ ಅವರನ್ನು ಉಡುಪಿ ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು. ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಲಾದ ಅಭಿನಂದನಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಅವರು ಕಾಮನ್ವೆಲ್ತ್ ಪದಕ ವೀರನನ್ನು ಸ್ವಾಗತಿಸಿದರು.

ಈ ಸಂದರ್ಭ ಜಿಲ್ಲಾಡಳಿತ ವತಿಯಿಂದ ಜಿಲ್ಲೆಯ ಕ್ರೀಡಾಪಟುಗಳ ಸಮ್ಮುಖದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಕುಂದಾಪುರ ಮೂಲದ ಗುರುರಾಜ್ ಪೂಜಾರಿ, 2022ರ ಬರ್ಮಿಂಗ್ ಹ್ಯಾಮ್ ನ ಕಾಮನ್ವೆಲ್ತ್ ಗೇಮ್ಸ್ ನ 61 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

2018 ರಲ್ಲಿ ಗೋಲ್ಡ್ ಕೋಸ್ಟ್‌ನಲ್ಲಿ ನಡೆದಿದ್ದ ಪುರುಷರ 56 ಕೆಜಿ ವಿಭಾಗದಲ್ಲಿ ಬೆಳ್ಳಿ ಜಯಿಸಿದ ನಂತರ, ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಇದು ಗುರುರಾಜ ಪೂಜಾರಿ ಅವರ ಎರಡನೇ ಪದಕವಾಗಿದೆ.

Edited By : Shivu K
Kshetra Samachara

Kshetra Samachara

08/08/2022 10:34 am

Cinque Terre

5.91 K

Cinque Terre

0

ಸಂಬಂಧಿತ ಸುದ್ದಿ