ಕಾಪು: ಉಡುಪಿ ಜಿಲ್ಲೆ ರಚನೆಯಾಗಿ 25 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡುವ ನಿಟ್ಟಿನಲ್ಲಿ ಕಾರ್ಕಳದ ಭುವನೇಂದ್ರ ಕಾಲೇಜಿನಿಂದ ಬೆಳ್ಮಣ್‌ವರೆಗೆ ಹಮ್ಮಿಕೊಳ್ಳಲಾಗಿದ್ದ ಮ್ಯಾರಥಾನ್ ಓಟಕ್ಕೆ ಬುಧವಾರ ಸಂಜೆ ಬಂಟಕಲ್ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಎದುರು ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಬಂಟಕಲ್ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್, ಬಿಜೆಪಿ ನಾಯಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ವೀಣಾ ಶೆಟ್ಟಿ. ಗೀತಾಂಜಲಿ ಸುವರ್ಣ, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಗಿರೀಶ್ ಕಾಮಚನ್, ಅರುಣ್ ಶೆಟ್ಟಿ ಪಾದೂರು, ಶ್ರೀಕಾಂತ್ ನಾಯಕ್, ನವೀನ್ ಶೆಟ್ಟಿ ಕುತ್ಯಾರು ಮತ್ತಿತರರು ಉಪಸ್ಥಿತರಿದ್ದರು.
Kshetra Samachara
24/08/2022 10:37 pm