ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಲಕರ ಹಾಗೂ ಬಾಲಕಿಯರ ಖೋ ಖೋ ಪಂದ್ಯಾಟ : ಬೀಜಾಡಿ ಶಾಲೆ ಜಿಲ್ಲಾ ಮಟ್ಟಕ್ಕೆ

ಕುಂದಾಪುರ : ಇಲ್ಲಿನ ರಾಮ್ಸನ್ ಸರಕಾರಿ ಪ್ರೌಢಶಾಲೆ ಕಂಡ್ಲೂರಿನಲ್ಲಿ ಜರುಗಿದ ಕುಂದಾಪುರ ವಲಯ ಮಟ್ಟದ ಪ್ರೌಢಶಾಲಾ ಬಾಲಕರ ಹಾಗೂ ಬಾಲಕಿಯರ ಬೋ ಖೋ ಪಂದ್ಯಾಟದಲ್ಲಿ ಸೀತಾಲಕ್ಷ್ಮಿ ಮತ್ತು ಬಿ ಎಂ ರಾಮಕೃಷ್ಣ ಹತ್ವಾರ್ ಸರಕಾರಿ ಪ್ರೌಢಶಾಲೆ ಬೀಜಾಡಿ ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ ವಿದ್ಯಾರ್ಥಿಗಳ ಈ ಸಾಧನೆಗೆ ಮುಖ್ಯೋಪಾಧ್ಯಾಯರು, ಅಧ್ಯಾಪಕರ ವೃಂದದವರು, ವಿದ್ಯಾರ್ಥಿಗಳು, ಎಸ್ ಡಿಎಂಸಿ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು ಅಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಉದಯ ಮೂಗವೀರ ಮಾರ್ಗದರ್ಶನ ನೀಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

27/08/2022 03:27 pm

Cinque Terre

1.78 K

Cinque Terre

0

ಸಂಬಂಧಿತ ಸುದ್ದಿ