ಹೆಬ್ರಿ : ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತಭಾರತಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಹೆಬ್ರಿ ತಾಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟ ನಡೆಯಿತು.
ಪಂದ್ಯಾಟವನ್ನು ರಾಷ್ಟ್ರೀಯ ಖೋಖೋ ಆಟಗಾರ ಸೀನಿಯರ್ ಜೀಸಿ ಅಧ್ಯಕ್ಷ ಹೆಬ್ರಿ ಕಲ್ಲಿಲ್ಲು ಪ್ರಕಾಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಸ್ಪರ್ಧೆಗಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳದೆ ತಮ್ಮ ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಅಮೃತ ಭಾರತಿ ವಿಜ್ಞಾನ ಕಾಲೇಜು ಆದರೂ ಕೂಡಾ ಸಂಸ್ಕೃತಿ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿರುವುದನ್ನು ಶ್ಲಾಘಿಸಲೇಬೇಕು ಎಂದರು.
ಅಮೃತಭಾರತಿ ಟ್ರಸ್ಟ್ ಅಧ್ಯಕ್ಷ ಸಿ.ಎ ಎಂ ರವಿರಾಜ್ ಅಧ್ಯಕ್ಷತೆ ವಹಿಸಿ ಮಾತನಾಡಿ ಎಲ್ಲಾ ವಿದ್ಯಾರ್ಥಿಗಳ ನಿಜವಾದ ಕ್ರೀಡಾ ಮನೋಭಾವದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಬೇಕಿದೆ ಎಂದರು .
ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರಾಜೇಶ್ ನಾಯಕ್ ಕಾರ್ಯದರ್ಶಿ ಗುರುದಾಸ್ ಶೆಣೈ ಪ್ರಾಂಶುಪಾಲ ಸುರೇಶ್ ಹೆಗ್ಡೆ ಕ್ರೀಡಾ ಸಂಯೋಜಕ ವಿಜಯ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ವೀಣೇಶ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.
Kshetra Samachara
13/09/2022 02:01 pm