ಬೈಂದೂರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಹಾಗೂ ಸರಕಾರಿ ಪ್ರೌಢಶಾಲೆ ಉಪ್ಪುಂದ ಇವರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಇಂದು ಸಡಗರ ಸಂಭ್ರಮದಲ್ಲಿ ಉಪ್ಪುಂದ ಪ್ರೌಢಶಾಲೆ ಮೈದಾನದಲ್ಲಿ ನಡೆಯಿತು.
ಸದಾಶಿವ್ ಗಾಣಿಗ ಉಪ್ಪುಂದ ದೀಪ ಬೆಳಗಿಸಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಿದರು. ಸಭಾ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮಿ ಖಾರ್ವಿ ವಹಿಸಿದ್ದರು.
ವಾಲಿಬಾಲ್ ಪಂದ್ಯಾಟದವನ್ನು ಉದ್ಘಾಟಿಸಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ ಮಾತನಾಡಿ ಕ್ರೀಡೆಯ ಮಹತ್ವದ ಬಗ್ಗೆ ಮಕ್ಕಳಿಗೆ ಹೇಳಿದರು ಹಾಗೂ ಹಿಂದೆ ವಾಲಿಬಾಲ್ ಪಂದ್ಯಾಟ ಬ್ರಹ್ಮಾವರ ಹಾಗೂ ಉಡುಪಿ ಭಾಗದ ಕಡೆಯಲ್ಲಿ ನೆರವೇರುತ್ತಿತ್ತು ಈಗ ನಮ್ಮ ಬೈಂದೂರು ಭಾಗದಲ್ಲಿ ನಡೆಯುತ್ತಿರುವುದು ತುಂಬಾ ಖುಷಿ ತಂದಿದೆ ಎಂದು ಹೇಳಿದರು. ಒಟ್ಟು 20 ತಂಡಗಳು ಭಾಗವಹಿಸಿದ್ದು, ಈ ಪೈಕಿ ಇಲ್ಲಿ ವಿಜೇತ ತಂಡಗಳು ಮುಂದೆ ಮೈಸೂರು ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗುತ್ತದೆ.
ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಆಯ್ಕೆಯಾದ ಸಚಿನ್ ಕುಮಾರ್ ಶೆಟ್ಟಿ ದೈಹಿಕ ಶಿಕ್ಷಕರು ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಉಪ ಪ್ರಾಂಶುಪಾಲರಾದ ಸತ್ಯನಾರಾಯಣ ಜಿ ಸ್ವಾಗತಿಸಿದರು. ಶಿಕ್ಷಕರಾದ ಕೇಶವ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿ, ಸತೀಶ್ ಶೆಟ್ಟಿ ವಂದಿಸಿದರು.
Kshetra Samachara
14/09/2022 09:28 pm