ಪದವಿಪೂರ್ವ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆಯುವ ಬೈಂದೂರು ತಾಲೂಕು ಮಟ್ಟದ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾಟವು ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಲಕ್ಷ್ಮಿ ಖಾರ್ವಿ ವಹಿಸಿದರು. ಉದ್ಯಮಿ ಶರತ್ ಶೆಟ್ಟಿ ಉಪ್ಪುಂದ ಪಂದ್ಯಾಟವನ್ನು ಉದ್ಘಾಟಿಸಿ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿ ಕ್ರೀಡೆಯಲ್ಲಿ ಪಾಲ್ಗೊಂಡ ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಇನ್ನು ತಾಲೂಕಿನ ವಿವಿಧ ಕಾಲೇಜಿನ 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಈ ಪಂದ್ಯಾಟದಲ್ಲಿ ಪ್ರಥಮ ಸ್ಥಾನದಲ್ಲಿ ಗಳಿಸಿದ ವಿದ್ಯಾರ್ಥಿಗಳು ಮುಂದೆ ನಡೆಯುವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುತ್ತಾರೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಯುವ ಉದ್ಯಮಿ ನಿತಿನ್ ನಾರಾಯಣ್, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಮುಂದಿನ ದಿನದಲ್ಲಿ ಕಾಲೇಜಿನ ಆಗು ಹೋಗುಗಳ ಏಳಿಗೆಗೆ ಶ್ರಮಿಸುವುದಾಗಿ ತಿಳಿಸಿದರು.
ಈ ಸಂದರ್ಭ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶ್ರೀ ಪ್ರಕಾಶ್ ಭಟ್, ಕಾಲೇಜಿನ ಪ್ರಾಂಶುಪಾಲರು ಡಾ ಯಾದವ್ ವಿ ಕರ್ಕೇರ, ಉಪಪ್ರಾಂಶುಪಾಲ ಸತ್ಯನಾರಾಯಣ ವಿವಿಧ ಕಾಲೇಜಿನ ದೈಹಿಕ ಶಿಕ್ಷಕರು ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಸಹಶಿಕ್ಷಕರು ಉಪ್ಪುಂದ ಗ್ರಾಮದ ಸಾರ್ವಜನಿಕರು ಎಲ್ಲಾ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.
PublicNext
20/09/2022 05:13 pm