ಮುಲ್ಕಿ: ಮೂಲ್ಕಿಯ ಇತಿಹಾಸ ಪ್ರಸಿದ್ಧ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿರುವ ದಾನಿ ಎಂ. ನಾರಾಯಣ್ ಶೆಟ್ಟಿ ರವರ ನೇತೃತ್ವದಲ್ಲಿ ಸುಮಾರು 6.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಕುಡಿಯುವ ನೀರಿನ ಬಾವಿಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಶಾಸಕರಾದ ಉಮಾನಾಥ ಎ ಕೋಟ್ಯಾನ್ ನೂತನ ಬಾವಿಯನ್ನು ಉದ್ಘಾಟಿಸಿ ಮಾತನಾಡಿ ದೇವಸ್ಥಾನದಲ್ಲಿ ಸ್ವಚ್ಛತೆಯನ್ನು ಕಾಪಾಡುವುದರ ಜೊತೆಗೆ ನೀರಿನ ಅಭಾವಕ್ಕಾಗಿ ದಾನಿಗಳ ನೆರವಿನಿಂದ ನೂತನ ಭಾವಿ ರಚನೆಯಾಗಿದ್ದು ಅಭಿವೃದ್ಧಿಯ ಸಂಕೇತ ಎಂದರು.
ಈ ಸಂದರ್ಭ ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಅರ್ಚಕ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಿಲ್ಪಾಡಿ ಭಂಡಸಾಲೆ ಶೇಖರ ಶೆಟ್ಟಿ, ವಿಶ್ವಕರ್ಮ ಒಕ್ಕೂಟದ ಮಧು ಆಚಾರ್ಯ, ಧನಂಜಯ ಮಟ್ಟು, ರಂಗನಾಥ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಸುನಿಲ್ ಆಳ್ವಾ ನಿರೂಪಿಸಿದರು
Kshetra Samachara
20/08/2021 05:19 pm