ಸುರತ್ಕಲ್: ಸಮೀಪದ ಸೂರಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಪ್ರೌಢ ಶಾಲೆಯಲ್ಲಿ ಜಲ್ ಜೀವನ ಮಿಷನ್ನಿನ ವತಿಯಿಂದ ಶಾಲಾ ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮ, ಭಿತ್ತಿಪತ್ರ ತಯಾರಿಸುವ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮ ನಡೆಯಿತು.
ಭಿತ್ತಿಪತ್ರ ತಯಾರಿಸುವ ಸ್ಪರ್ಧೆಯಲ್ಲಿ ಸುಮಾರು15 ವಿಧ್ಯಾರ್ಥಿಗಳು ಮತ್ತು ಚಿತ್ರಕಲೆಯಲ್ಲಿ 22 ವಿಧ್ಯಾರ್ಥಿಗಳು ಸ್ಪರ್ಧಿಸಿದ್ದರು.
ಸೂರಿಂಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ ಶೆಟ್ಟಿ ಬಹುಮಾನ ವಿತರಿಸಿದರು.
ಬಳಿಕ ಜಲ ಸಂರಕ್ಷಣೆ ಬಗ್ಗೆ ಶಾಲಾ ಮಕ್ಕಳ ಜಾಥಾ ನಡೆಯಿತು.ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ ಮತ್ತು ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
25/11/2021 07:44 am