ಮಂಗಳೂರು: 33/11ಕೆ.ವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ. ಮಾರ್ಕೆಟ್ ಫೀಡರ್ ಹಾಗೂ 11ಕೆ.ವಿ. ವಿವೇಕ್ ಮೋಟಾರ್ ಫೀಡರ್ ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜೂ.24ರ ಬೆಳಗ್ಗೆ 10 ರಿಂದ 5ರವರೆಗೆ ಲೇಡಿಗೋಷನ್ ಆಸ್ಪತ್ರೆ, ಸೆಂಟ್ರಲ್ ಮಾರ್ಕೆಟ್, ಶಾಂತದುರ್ಗಾ, ಜೆ.ಎಚ್.ಎಸ್. ರಸ್ತೆ, ಪಿ.ಎಂ. ರಾವ್ ರಸ್ತೆ, ಗೌರಿಮಠ ರೋಡ್, ರಾಘವೇಂದ್ರ ಮಠ ರಸ್ತೆ, ಮೈದಾನ್ 3ನೇ ಕ್ರಾಸ್, ಮೈದಾನ್ 4ನೇ ಕ್ರಾಸ್, ಬೀಬಿ ಅಲಾಬಿ ರಸ್ತೆ, ರಾವ್ ಅಂಡ್ ರಾವ್ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಕದ್ರಿ
33/11 ಕೆ.ವಿ. ಕದ್ರಿ ಉಪಕೇಂದ್ರದಿಂದ ಹೊರಡುವ 11ಕೆ.ವಿ ಶಿವಭಾಗ್ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜೂ.24ರ ಬೆಳಗ್ಗೆ 10 ರಿಂದ 4ರವರೆಗೆ ಶಿವಭಾಗ್ 1ನೇ ಕ್ರಾಸ್, 2ನೇ ಕ್ರಾಸ್, 3ನೇ ಕ್ರಾಸ್, 4ನೇ ಕ್ರಾಸ್, 5ನೇ ಕ್ರಾಸ್ ಮತ್ತು 6ನೇ ಕ್ರಾಸ್ ರಸ್ತೆ ಹಾಗೂ ಆಭರಣ ಜ್ಯುವೆಲ್ಲರಿಯ ಹಿಂದುಗಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
Kshetra Samachara
23/06/2022 11:18 am