ಮಂಗಳೂರು: 33/11ಕೆ.ವಿ. ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ. ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ. ಮಾರ್ಕೆಟ್ ಫೀಡರ್ ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ. ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.
ಈ ಹಿನ್ನೆಲೆ ಸೆ.9ರ ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಮೈದಾನ್ 3ನೇ ಕ್ರಾಸ್, 4ನೇ ಕ್ರಾಸ್, ಬೀಬಿ ಅಲಾಬಿ ರಸ್ತೆ, ರಾವ್ ಆ್ಯಂಡ್ ರಾವ್ ಸರ್ಕಲ್, ಲೇಡಿಗೋಷನ್ ಹಾಸ್ಪಿಟಲ್, ಸೆಂಟ್ರಲ್ ಮಾರ್ಕೆಟ್, ರಾಘವೇಂದ್ರ ಮಠ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಕುಲಶೇಖರ: 110/33/11ಕೆ.ವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಎಕ್ಕೂರು ಮತ್ತು 11ಕೆ.ವಿ ಪಂಪ್‍ವೆಲ್ ಫೀಡರ್ ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಸೆ.9ರ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ಉಜ್ಜೋಡಿ, ನೆಕ್ಕರೆಮಾರ್, ಕೆಂಬಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಲಿದೆ.
ಉರ್ವ ಮಾರ್ಕೆಟ್: 33/11ಕೆ.ವಿ ಉರ್ವ ಮಾರ್ಕೆಟ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಡೊಮಿನಿಕ್ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಸೆ.9ರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕೋಡಿಕಲ್ ಕ್ರಾಸ್ ರೋಡ್, ಡೊಮಿನಕ್ ಚರ್ಚ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಕುಲಶೇಖರ: 110/33/11ಕೆ.ವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಶಕ್ತಿನಗರ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಈ ಹಿನ್ನೆಲೆ ಸೆ.9 ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಕಲ್ಪನೆ, ಕೈಕಂಬ, ಶಕ್ತಿನಗರ, ಕೆ.ವಿ.ಎಸ್. ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.
Kshetra Samachara
08/09/2022 08:32 pm