ಉಡುಪಿ: ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ.ಪಿ.ಎಸ್. ಹರ್ಷ ಇಂದು ಉಡುಪಿಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ಕಡತಗಳ ಪರಿಶೀಲನೆ ನಡೆಸಿದರು.
ವಾರ್ತಾ ಇಲಾಖೆಯು ಈ ಹಿಂದೆ ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಪ್ರಚಾರ ಪಡಿಸುತ್ತಿದ್ದು, ಆದರೆ ಪ್ರಸ್ತುತ ದಿನಗಳಲ್ಲಿ ಸರ್ಕಾರ ಮತ್ತು ಸಾರ್ವಜನಿಕರ ಕೊಂಡಿಯಾಗಿಯೂ ಕಾರ್ಯ ನಿರ್ವಹಿಸಬೇಕಾಗಿದ್ದು, ಅತ್ಯಂತ ಜವಾಬ್ದಾರಿಯುತವಾಗಿ ಇತರ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ, ಕಚೇರಿ ಸಮಯದ ಹೊರತಾಗಿಯೂ ಕಾರ್ಯ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಕಚೇರಿಯ ಎಲ್ಲಾ ಸಿಬ್ಬಂದಿ ತಮ್ಮ ದೈನಂದಿನ ಕರ್ತವ್ಯದ ಜೊತೆಗೆ ಕಚೇರಿಯ ಇನ್ನಿತರ ಕಾರ್ಯಗಳನ್ನೂ ಸಹ ತಮ್ಮ ಕರ್ತವ್ಯ ಎಂದು ಭಾವಿಸಿ ತಪ್ಪದೇ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರಿಗೆ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುತ್ತಿರುವ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸಿದರು.
Kshetra Samachara
11/10/2020 06:07 pm