ಉಡುಪಿ: ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದ.ಕ. ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಬಗ್ಗೆ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.
ಅಕ್ಟೋಬರ್ 13 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದೂ ಇಲಾಖೆ ಮುನ್ಸೂಚನೆ ನೀಡಿದೆ.ಅಂಡಮಾನ್ ಭಾಗದಲ್ಲಿ ವಾಯುಭಾರ ಹೆಚ್ಚಾಗಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ ಎಂದೂ ಅದು ಹೇಳಿದೆ.
Kshetra Samachara
12/10/2020 04:18 pm