ಉಡುಪಿ: ಭಾರೀ ಗಾಳಿ ನಡುವೆಯೂ ಪ್ರಾಣ ಪಣಕ್ಕಿಟ್ಟು ನಾಡದೋಣಿ ಮೀನುಗಾರರು ಕಸಬು ನಡೆಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ಎದ್ದ ಚಂಡಮಾರುತಕ್ಕೆ ಅರಬ್ಬಿ ಸಮುದ್ರ ನಡುಗಿ ಹೋಗಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಮುಂಗಾರಿನ ಅಬ್ಬರ ಕಡಿಮೆಯಾಗುತ್ತಿದ್ದಂತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಪೂರ್ವ ಕರಾವಳಿಯ ರಾಜ್ಯಗಳಲ್ಲಿ ಕಳೆದ ಐದು ದಿನಗಳಿಂದ ಭಾರೀ ಮಳೆಯಾಗುತ್ತಿದೆ.
ಉಡುಪಿ ಜಿಲ್ಲೆಯಲ್ಲಿ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿತ್ತು. ಇದೀಗ ಮುಂದಿನ 24 ತಾಸುಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಡುವೆಯೂ ಒಂದೆರಡು ನಾಡದೋಣಿಗಳು ಕಡಲಿಗೆ ಇಳಿದು ಮೀನುಗಾರಿಕೆಯನ್ನು ನಡೆಸಿವೆ. ನಾಲ್ಕೈದು ದಿನಗಳ ಕಾಲ ಕಸುಬು ಇಲ್ಲದೆ ಇದರಿಂದ ಪ್ರಾಣವನ್ನು ಪಣಕ್ಕಿಟ್ಟು ಮೊಗವೀರರು ಮೀನುಗಾರಿಕೆಯನ್ನು ನಡೆಸಿದ್ದಾರೆ.
Kshetra Samachara
15/10/2020 05:07 pm