ಕಾಪು: ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಶನಿವಾರ ತೆಂಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾದ ಸಂತ್ರಸ್ತ ಕುಟುಂಬಗಳಿಗೆ ಮಂಜೂರು ಪತ್ರ ವಿತರಿಸಿದರು.
ಈ ಸಂದರ್ಭ ತಾಲೂಕು ಪಂಚಾಯತ್ ಸದಸ್ಯ ಕೇಶವ ಮೊಯ್ಲಿ, ಪಕ್ಷದ ಪ್ರಮುಖರಾದ ಶಿವಪ್ರಸಾದ್ ಶೆಟ್ಟಿ, ವಿನಯ ಕುಮಾರ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಸ್ಥರು ಉಪಸ್ಥಿತರಿದ್ದರು.
ಸುಮಾರು 22 ಕುಟುಂಬಗಳಿಗೆ ಮಂಜೂರು ಪತ್ರ ವಿತರಿಸಲಾಯಿತು.
Kshetra Samachara
24/10/2020 05:02 pm