ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಗ್ರಾಮಸ್ಥರಿಗೆ ಕಾಟ ಕೊಡುತ್ತಿದ್ದ ಚಿರತೆ ಬೋನಿಗೆ !

ಕಾರ್ಕಳ: ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್‌ ಬೆಟ್ಟುವಿನ ಜನವಸತಿ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಅಡ್ಡಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದೊಂದು ವಾರದ ಹಿಂದೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಚಿರತೆ ಸೆರೆಗೆ ಬೋನು ಇರಿಸಿದ್ದರು.

ಇದೀಗ ಚಿರತೆ ಬೋನಿಗೆ ಬೀಳುವ ಮೂಲಕ ಗ್ರಾಮಸ್ಥರು ನೆಮ್ಮದಿ‌ಯ ನಿಟ್ಟುಸಿರು ಬಿಡುವಂತಾಗಿದೆ.ಕಾರ್ಕಳ ವಲಯ ಅರಣ್ಯಾಧಿಕಾರಿ ಜಿ.ಡಿ.ದಿನೇಶ್‌ ನೇತೃತ್ವದಲ್ಲಿ ಸ್ಥಳೀಯರ ಸಹಕಾರದೊಂದಿಗೆ ಚಿರತೆಯನ್ನು ಸೆರೆಹಿಡಿಯಲಾಯಿತು.

Edited By : PublicNext Desk
Kshetra Samachara

Kshetra Samachara

08/04/2022 11:46 am

Cinque Terre

1.98 K

Cinque Terre

1

ಸಂಬಂಧಿತ ಸುದ್ದಿ