ಉಡುಪಿ: ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 19 ಮತ್ತು 20ರಂದು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದಿರುವ ಹವಾಮಾನ ಇಲಾಖೆ, ಆರೆಂಜ್ ಅಲರ್ಟ್ಘೋಷಿಸಿದೆ.
ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪ್ರಸ್ತುತ ಸಮುದ್ರ ಪ್ರಕ್ಷುಬ್ಧವಾಗಿದೆ. ಜತೆಗೆ ಆಗಾಗ ವೇಗವಾಗಿ ಗಾಳಿ ಕೂಡ ಬೀಸುತ್ತಿದೆ. ಆದುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಕರ್ನಾಟಕ ಕರಾವಳಿಯಾದ್ಯಂತ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.
ಕೆಲವೊಮ್ಮೆ ಗಾಳಿಯ ವೇಗ ಗಂಟೆಗೆ 60.ಕಿ.ಮೀ. ವರೆಗೆ ತಲುಪುವ ಸಾಧ್ಯತೆ ಇದೆ. ಈ ವೇಳೆ ಮಂಗಳೂರಿನಿಂದ ಕಾರವಾರದವರೆಗಿನ ಸಮುದ್ರದಲ್ಲಿ ಎರಡರಿಂದ 2.6 ಮೀಟರ್ ಎತ್ತರದವರೆಗೆ ಅಲೆಗಳು ಏಳುವ ಸಂಭವ ಇರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Kshetra Samachara
18/06/2022 11:21 am