ಕಾರ್ಕಳ: ಗುರುವಾರ ಮಧ್ಯಾಹ್ನ ಬಂದ ಭಾರೀ ಗಾಳಿಮಳೆಗೆ ಕಾರ್ಕಳ ತಾಲೂಕಿನ ಪಡುಬೆಳ್ಮಣ್ ಶ್ರೀ ಮಹಾಲಿಂಗೇಶ್ವರ ದೇವಾಲಯದ ಮೇಲ್ಛಾವಣಿ ಕುಸಿದು ಬಿದ್ದು ಅಪಾರ ನಷ್ಟ ಉಂಟಾಗಿದೆ.
ಘಟನಾ ಸ್ಥಳಕ್ಕೆ ಬೆಳ್ಮಣ್ ಗ್ರಾ. ಪಂ ಅಧ್ಯಕ್ಷ ಜನಾರ್ದನ ತಂತ್ರಿ, ಗ್ರಾಮಕರಣಿಕ ಸುದರ್ಶನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಹಾನಿಯಿಂದ ಸುಮಾರು 12 ಲಕ್ಷ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಇದಲ್ಲದೆ ನಿನ್ನೆಯ ಗಾಳಿಮಳೆಗೆ ಹಲವು ಕಡೆ ಮನೆಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿದೆ.
Kshetra Samachara
15/07/2022 11:16 am