ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಮತ್ತು ಬುಧವಾರ ವ್ಯಾಪಕ ಮಳೆ ಸುರಿದಿದೆ. ನಿನ್ನೆ ತಡರಾತ್ರಿ ಕಾಪು, ಬ್ರಹ್ಮಾವರ, ಉಡುಪಿ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ. ಗಾಳಿ-ಮಳೆಯಿಂದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.
ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳದಲ್ಲಿಯೂ ಹೆಚ್ಚಿನ ಮಳೆಯಾಗಿದೆ. ಬುಧವಾರ ಬಿಸಿಲು-ಮೋಡ ಕವಿದ ವಾತಾವರಣ ನಡುವೆ ಬಿಟ್ಟುಬಿಟ್ಟು ಮಳೆಯಾಗಿದೆ. ಸಂಜೆ ಅನಂತರ ಉಡುಪಿ, ಮಣಿಪಾಲ, ಪರ್ಕಳ, ಮಲ್ಪೆ ಸುತ್ತಮುತ್ತ ಉತ್ತಮ ಮಳೆ ಸುರಿದಿದೆ.ಇಂದು ಸಾಧಾರಣ ಮಳೆ ಇದ್ದು ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
Kshetra Samachara
08/09/2022 12:58 pm