ಉಡುಪಿ: ಮಣಿಪಾಲ - ಪೆರಂಪಳ್ಳಿ - ಅಂಬಾಗಿಲು ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ರಸ್ತೆ ಅಗಲೀಕರಣಕ್ಕೆ ಭೂಸ್ವಾಧೀನ ಪಡಿಸಲು ಟಿ.ಡಿ.ಆರ್. ಪ್ರಕ್ರಿಯೆಗೆ ನೋಟಿಫಿಕೇಶನ್ ಆಗಿರುವಂತೆ ರಸ್ತೆಗೆ ಜಾಗ ಬಿಟ್ಟುಕೊಡಬೇಕಾದ ಭೂ ಮಾಲಕರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಲಾಯಿತು.
ಎಲ್ಲಾ ಪ್ರಕ್ರಿಯೆ ತ್ವರಿತವಾಗಿ ಮುಗಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಕೆ. ರಘುಪತಿ ಭಟ್ ಸಭೆ ನಡೆಸಿದರು.
ಟಿ.ಡಿ.ಆರ್. ಪ್ರಕ್ರಿಯೆ ಬಗ್ಗೆ ತಹಶೀಲ್ದಾರ್ ಖಾಸಗಿ ಭೂಮಾಲಕರಿಗೆ ನೋಟಿಸ್ ಜಾರಿಗೊಳಿಸಿ ಜಾಗದ ದಾಖಲೆ ಪತ್ರ ಹಾಜರುಪಡಿಸುವಂತೆ ಸೂಚಿಸುವುದು ಹಾಗೂ ಜಾಗ ಗುರುತಿಸುವ ಬಗ್ಗೆ ತೀರ್ಮಾನಿಸಲಾಯಿತು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಸಹಾಯಕ ಆಯುಕ್ತ ರಾಜು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಅಶೋಕ್, ಸಹಾಯಕ ಕಾರ್ಯಪಾಲಕ ಅಭಿಯಂತರ ಜಗದೀಶ್ ಭಟ್, ಪೌರಾಯುಕ್ತ ಆನಂದ್ ಸಿ. ಕಲ್ಲೋಳಿಕರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
10/10/2020 02:35 pm