ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಇತ್ತೀಚೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಜೋರಾಗಿರುವ ಹೊತ್ತಿಗೇ ಪ್ರಮೋದ್ ಮಧ್ವರಾಜ್ ಡಿಕೆಶಿ ಅವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.
ಇತ್ತೀಚೆಗೆ ಕಾಂಗ್ರೆಸ್ ನ ಮಾಜಿ ಶಾಸಕರೊಬ್ವರು ಪ್ರಮೋದ್ ಮಧ್ವರಾಜ್ ಅವರನ್ನು ದೂಷಿಸುವ ಆಡಿಯೋ ಸಂಭಾಷಣೆ ವೈರಲ್ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಸದ್ಯ, ಜಿಲ್ಲಾ ಕಾಂಗ್ರೆಸ್ ನಲ್ಲಿ ಮಾಜಿ ಶಾಸಕರು ಮತ್ತು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಣದ ಮಧ್ಯೆ ಭಾರಿ ಶೀತಲ ಸಮರ ನಡೆಯುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಈ ಇಬ್ಬರು ನಾಯಕರ ಪ್ರತಿಷ್ಠೆ ಮಧ್ಯೆ ಗೊಂದಲಕ್ಕೆ ಸಿಲುಕಿದ್ದಾರೆ.
ಇಂದಿನ ಭೇಟಿಯಲ್ಲಿ ರಾಜ್ಯ ರಾಜಕಾರಣ ಮತ್ತು ಜಿಲ್ಲಾ ರಾಜಕಾರಣದ ಕುರಿತು ಸಮಾಲೋಚನೆ ನಡೆದಿದೆ ಎನ್ನಲಾಗಿದೆ.
Kshetra Samachara
10/10/2020 02:37 pm