ಬೆಳ್ತಂಗಡಿ: ಆಹಾರ ಅರಸಿ ನಾಡಿಗೆ ಬಂದ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ನಡುಚ್ಚೂರುದಲ್ಲಿ ನಡೆದಿದೆ.
ಮರೋಡಿ ಗ್ರಾಮದ ದಿವಾಕರ ಹೆಗ್ಡೆ ಅವರಿಗೆ ಸೇರಿದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ, ಅರ್ಧ ದೇಹವನ್ನು ತಿಂದು ಹಾಕಿದೆ. ಇದಕ್ಕೂ ಮುನ್ನ ಇಂತಹದ್ದೇ ಘಟನೆ ನಡೆದಿತ್ತು. ಕೆಲ ದಿನಗಳ ಹಿಂದೆ ಹರೀಶ್ ಹೆಗ್ಡೆ ಅವರ ಕರುವೊಂದನ್ನು ಚಿರತೆ ತಿಂದು ಹಾಕಿತ್ತು. ಹೀಗಾಗಿ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ಉಂಟಾಗಿದೆ.
ಗೋಭಕ್ಷಕ ಚಿರತೆಯನ್ನು ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಚಿರತೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದೆ.
Kshetra Samachara
20/10/2020 04:07 pm