ಉಡುಪಿ: ಆಶಾದೀಪ ಯೋಜನೆ ಬಗ್ಗೆ ಜಿಲ್ಲೆಯ ಎಲ್ಲ ಉದ್ದಿಮೆದಾರರಿಗೆ ಅಗತ್ಯ ಮಾಹಿತಿ ನೀಡಬೇಕು ಹಾಗೂ ಯೋಜನೆ. ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಕಾರ್ಮಿಕ ಇಲಾಖೆಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಕರ್ನಾಟಕ ಖಾಸಗಿ ವಲಯದ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿಸಿಕೊಡಲು, ಉದ್ದಿಮೆಗಳ ಮಾಲಕರನ್ನು ಪ್ರೋತ್ಸಾಹಿಸಲು ಈ ಯೋಜನೆ ಜಾರಿಗೆ ತರಲಾಗಿದ್ದು, ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಶಾದೀಪ ಯೋಜನೆ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಈ ಸಂದರ್ಭ ಆಶಾದೀಪ ಯೋಜನೆಯ ಪ್ರಯೋಜನ ಕೋರಿ ಅರ್ಜಿ ಸಲ್ಲಿಸಿದ ಏಕೋ ಕೆಮ್ ಲ್ಯಾಬೋರೆಟರೀಸ್ ಸಂಸ್ಥೆ ಮಾಲೀಕರಿಗೆ 1,03,035 ರೂ. ಚೆಕ್ ಜಿಲ್ಲಾಧಿಕಾರಿ ವಿತರಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್., ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರೇಮ್ ಸಾಗರ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
11/11/2020 10:05 pm