ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಬೇಕಾದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳು, ದೈವಸ್ಥಾನಗಳ ಅಭಿವೃದ್ಧಿಗೆ ಸಂಬಂಧಿಸಿ ಚರ್ಚೆ ನಡೆಸಲು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿಯವರು ರಾಜ್ಯ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆಯವರನ್ನು ಭೇಟಿ ಮಾಡಿದರು.
ಭೇಟಿ ಸಂದರ್ಭ ಬೈಂದೂರಿನ ಗ್ರಾಮೀಣ ಭಾಗಗಳಲ್ಲಿರುವ ಅತೀ ಪುರಾತನವಾದ ದೈಸ್ಥಾನಗಳು ಹಾಗೂ ದೇವಸ್ಥಾನಗಳ ಅಭಿವೃದ್ಧಿಯ ಬಗ್ಗೆಯೂ ಚರ್ಚಿಸಲಾಗಿದ್ದು, ಸಚಿವೆ ಶಶಿಕಲಾ ಜೊಲ್ಲೆ ಕ್ಷೇತ್ರದ ಅಭಿವೃದ್ಧಿಗೆ ಪೂರಕ ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ತಿಳಿಸಿದ್ದಾರೆ.
Kshetra Samachara
15/09/2022 06:07 pm