ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: 'ಶುದ್ಧ ಕನ್ನಡದ ಬಳಕೆ ಯಕ್ಷಗಾನದಲ್ಲಿ ಮಾತ್ರ ಸಾಧ್ಯ'

ಕುಂದಾಪುರ: ಶುದ್ಧ ಕನ್ನಡದ ಬಳಕೆ ಯಕ್ಷಗಾನದಲ್ಲಿ ಮಾತ್ರ ಸಾಧ್ಯ. ಕನ್ನಡ ಉಳಿಸಿ ಬೆಳೆಸುವಲ್ಲಿ ಯಕ್ಷಗಾನ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಖ್ಯಾತ ಯಕ್ಷಗಾನ ಕಲಾವಿದ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೀರ್ಥಹಳ್ಳಿ ಗೋಪಾಲ ಆಚಾರ್ಯ ಹೇಳಿದರು.

ಅವರು ಉಪ್ಪುಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದ ಇದರ 49ನೇ ವರ್ಷದ ಗಣೇಶೋತ್ಸವದ ಸಂದರ್ಭದಲ್ಲಿ ಯಕ್ಷಗಾನ ಕ್ಷೇತ್ರದ ಅಪ್ರತಿಮ ಸಾಧನೆಗಾಗಿ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಆಂಗ್ಲ ಭಾಷಾ ವ್ಯಾಮೋಹದ ಭರಾಟೆಯ ನಡುವೆ ಪೋಷಕರು ಯಕ್ಷಗಾನದಲ್ಲಿ ಮಕ್ಕಳಿಗೆ ಆಸಕ್ತಿ ಬರುವಂತೆ ಮಾಡುವ ದೊಡ್ಡ ಜವಾಬ್ದಾರಿ ನಿರ್ವಹಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಉದ್ಯಮಿ ಜಿ. ಗೋಕುಲ ಶೆಟ್ಟಿ, ಗಣೇಶೋತ್ಸವದ ಅಧ್ಯಕ್ಷ ಯು. ಸಂದೇಶ ಭಟ್, ಉದ್ಯಮಿ ಕುಶಲ ಶೆಟ್ಟಿ ಕಾರ್ಯದರ್ಶಿ ಜನಾರ್ದನ ಖಾರ್ವಿ ಸಮಿತಿಯ ಸದಸ್ಯರಾದ ಮಂಜುನಾಥ ದೇವಾಡಿಗ, ಅನಿಲ್. ಡಿ ಉಪ್ಪುಂದ, ಆನಂದ ದೇವಾಡಿಗ ಉಪಸ್ಥಿತರಿದ್ದರು. ವೇದಮೂರ್ತಿ ಶಂಕರನಾರಾಯಣ ಭಟ್ ಸ್ವಾಗತಿಸಿದರು, ಕಾರ್ಯದರ್ಶಿ ಜನಾರ್ಧನ ಖಾರ್ವಿ ನಿರೂಪಿಸಿ ವಂದಿಸಿದರು.

Edited By : PublicNext Desk
Kshetra Samachara

Kshetra Samachara

07/09/2022 11:00 pm

Cinque Terre

2.45 K

Cinque Terre

0

ಸಂಬಂಧಿತ ಸುದ್ದಿ