ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಜಿಲ್ಲಾ ಆದರ್ಶ ಶಿಕ್ಷಕಗೆ ಕರಾವಳಿ ಕಾವಲುಪಡೆ ಸನ್ಮಾನ

ಕುಂದಾಪುರ: ಉಡುಪಿ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ವಿಜೇತ ಗಂಗೊಳ್ಳಿ ಸ.ವಿ.ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಉಮೇಶ ಕರ್ಣಿಕ್ ಅವರನ್ನು ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಜರಗಿದ ಸರಳ ಕಾರ್ಯಕ್ರಮದಲ್ಲಿ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ನಂಜಪ್ಪ ಅವರು ಉಮೇಶ ಕರ್ಣಿಕ್ ಅವರನ್ನು ಗೌರವಿಸಿ ಶುಭ ಹಾರೈಸಿದರು.

ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಉಪನಿರೀಕ್ಷಕ ವಿಜಯ ಅಮೀನ್, ಪೊಲೀಸ್ ಠಾಣೆಯ ಸಿಬ್ಬಂದಿಗಳು, ಕೆಎನ್ಡಿ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ದಿನೇಶ್ ಸ್ವಾಗತಿಸಿದರು. ನಾಗರಾಜ ಖಾರ್ವಿ ಕಾರ್ಯಕ್ರಮ ನಿರ್ವಹಿಸಿದರು. ರಾಘವೇಂದ್ರ ವಂದಿಸಿದರು.

Edited By : PublicNext Desk
Kshetra Samachara

Kshetra Samachara

12/09/2022 09:48 pm

Cinque Terre

864

Cinque Terre

0

ಸಂಬಂಧಿತ ಸುದ್ದಿ