ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ಟೋಬರ್ 1ರಂದು ಅಮಾಸೆಬೈಲಿನಲ್ಲಿ "ಕೊಡ್ಡಿ ನೆನಪು"

ಕುಂದಾಪುರ: ಕರ್ನಾಟಕ ಮೂರನೇ ಹಣಕಾಸು ಆಯೋಗದ ಅಧ್ಯಕ್ಷರಾಗಿ, ಬೈಂದೂರು ಕ್ಷೇತ್ರದ ಶಾಸಕರಾಗಿ, ಸಹಕಾರಿ ಧುರೀಣರಾಗಿ, ಹೈನುಗಾರಿಕೆ, ಕೃಷಿ, ತೋಟಗಾರಿಕೆ ಕ್ಷೇತ್ರಗಳಲ್ಲಿ ಪ್ರಗತಿಪರ ಕಾರ್ಯಗಳಿಂದ ಜನಪ್ರಿಯರಾಗಿದ್ದ ದಿ. ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಡಿಯವರ ಜನ್ಮದಿನ ಅಕ್ಟೋಬರ್ 1 ರಂದು "ಕೊಡ್ಡಿ ನೆನಪು" ಎಂಬ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಅಮಾಸೆಬೈಲು ಹಿರಿಯ ಪ್ರಾಥಮಿಕ ಶಾಲೆಯ ಎ.ಜಿ. ಕೊಡ್ಡಿ ಬಯಲು ರಂಗ ಮಂಟಪದಲ್ಲಿ ಅಂದು ಮಧ್ಯಾಹ್ನ ಗಂಟೆ 3:30ಕ್ಕೆ ನಡೆಯುವ ಕಾರ್ಯಕ್ರಮವನ್ನು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಲಿದ್ದಾರೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ, ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ, ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ, ಕರ್ಣಾಟಕ ಬ್ಯಾಂಕ್ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್., ಅಮಾಸೆಬೈಲು ಗ್ರಾ. ಪಂ. ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಎಲ್. ಎಚ್.ಮಂಜುನಾಥ್, “ಕೊಡ್ಡಿ ನೆನಪು" ನುಡಿ ಬೆಳಕು ನೀಡಲಿದ್ದಾರೆ. ಎ.ಜಿ. ಕೊಡ್ಡಿ ಅಭಿಮಾನಿ ಬಳಗ ಹಾಗೂ ಅಮಾಸೆಬೈಲು ಚಾರಿಟೆಬಲ್ ಟ್ರಸ್ಟ್ (ರಿ.) ಈ ಕಾರ್ಯಕ್ರಮವನ್ನು ಸಂಯೋಜಿಸಿದೆ.

Edited By : PublicNext Desk
Kshetra Samachara

Kshetra Samachara

27/09/2022 09:35 pm

Cinque Terre

1.14 K

Cinque Terre

0

ಸಂಬಂಧಿತ ಸುದ್ದಿ