ಕೋಟ : ರಾಜ್ಯದ ಹೆಸರಾಂತ ಸಾಹಿತಿ ಪದ್ಮಶ್ರೀ ಪುರಸ್ಕೃತ ಡಾ.ಎಸ್.ಎಲ್.ಭೈರಪ್ಪ ಅವರನ್ನು ಪ್ರತಿಷ್ಠಿತ ಡಾ.ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ 2020 ಕ್ಕೆ ಆಯ್ಕೆ ಮಾಡಲಾಗಿದೆ.
ಕೋಟ ಶಿವರಾಮ ಕಾರಂತರ ಜನ್ಮದಿನವಾದ ಅಕ್ಟೋಬರ್ 10ರಂದು ಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಡಾ.ಶಿವರಾಮ ಕಾರಂತ ಟ್ರಸ್ಟ್ ನ ಸಮಿತಿ ಸಭೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಿತು.ಸಮಿತಿ ಸದಸ್ಯರಾದ ಶ್ರೀಮತಿ ಮಾಲಿನಿ ಮಲ್ಯ,ಶ್ರೀ ವರದೇಶ್ ಹಿರೇಗಂಗೆ,ಶ್ರೀ ಸುರೇಂದ್ರ ಅಡಿಗ,ಶ್ರೀ ಉಪೇಂದ್ರ ಸೋಮಯಾಜಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ,ಸಹಾಯಕ ನಿರ್ದೇಶಕರು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ,ಉಪ ಅರಣ್ಯ ಸಂರಕ್ಷಣಾಧಿಕಾರಿ ಕುಂದಾಪುರ ಹಾಗೂ ಕೊಟತಟ್ಟು ಪಂಚಾಯತ್ ಅಭಿವೃದ್ಧಿ ಅಧಿಕಾರಿ,ಸಿಬ್ಬಂದಿ ಹಾಜರಿದ್ದರು.
Kshetra Samachara
25/09/2020 11:43 am