ಉಡುಪಿ: ಶ್ರೀ ಕೃಷ್ಣಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯಂದು ರಾತ್ರಿ ಕೃಷ್ಣ ದೇವರಿಗೆ ತುಳಸಿ ಅರ್ಚನೆ,ಮಹಾಪೂಜೆ ನೆರವೇರಿತು. ನಂತರ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು, ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು, ಗರ್ಭಗುಡಿಯೊಳಗೆ ಕೃಷ್ಣ ದೇವರಿಗೆ ಅರ್ಘ್ಯ ನೀಡಿ ಚಂದ್ರೋದಯ ಸಮಯದಲ್ಲಿತುಳಸೀಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ನೀಡಿದರು. ನಂತರ ಭಕ್ತಾದಿಗಳಿಂದ ಅರ್ಘ್ಯಪ್ರಧಾನ ನಡೆಯಿತು.
Kshetra Samachara
31/08/2021 10:43 am