ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲೆ ವಕೀಲರ ಸಂಘ(ರಿ.)ಉಡುಪಿ ಹಿರಿಯ ನಾಗರಿಕರ ಸಂಸ್ಥೆಗಳು- ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ(ರಿ.) ವೃದ್ಧಾಶ್ರಮಗಳ ಸಂಯುಕ್ತ ಆಶ್ರಯದಲ್ಲಿ ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜು ಗೀತಾಂಜಲಿ ಸಭಾಂಗಣದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ವಕೀಲರ ಸಂಘದ ಅಧ್ಯಕ್ಷರಾದ ಬಿ. ನಾಗರಾಜ್, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಸಿ.ಎಸ್ ರಾವ್ ಹಾಗೂ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಪೊಲೀಸ್ ಉಪಾಧೀಕ್ಷಕರಾದ ಸುಧಾಕರ್ ನಾಯಕ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆಯ ಸದಸ್ಯರಾದ ಶರ್ಮಿಳಾ ಎಸ್, ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಹಾಗೂ ಹಿರಿಯನಾಗರಿಕರ ಇಲಾಖೆಯ ರತ್ನ ಮತ್ತು ವಿವಿಧ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
01/10/2021 03:14 pm