ಉಡುಪಿ
ಕುಂದಾಪುರ: ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ರಾಜ್ಯದಾದ್ಯಂತ ಲಕ್ಷಾಂತರ ಜನರು ಏಕಕಾಲಕ್ಕೆ ಕನ್ನಡ ಗೀತಾ ಗಾಯನದಲ್ಲಿ ಪಾಲ್ಗೊಂಡಿದ್ದು, ಕುಂದಾಪುರದಲ್ಲೂ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಕುಂದಾಪುರ ಪುರಸಭೆಯ ವತಿಯಿಂದ ಕೋಡಿ ಬ್ಯಾರೀಸ್ ಸಮೂಹ ಸಂಸ್ಥೆಯಲ್ಲಿ ಆಯೋಜಿಸಲಾದ ಗೀತಾ ಗಾಯನದಲ್ಲಿ ಖುದ್ದು ಪುರಸಭೆಯ ಮುಖ್ಯಾಧಿಕಾರಿ ಹೆಜ್ಜೆ ಹಾಕಿ ಸಂಭ್ರಮಿಸಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು ಹಾಡಿಗೆ ಹೆಜ್ಜೆ ಹಾಕಿದ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿಯವರೊಂದಿಗೆ ವಿದ್ಯಾರ್ಥಿಗಳೂ ಸೇರಿ ಹೆಜ್ಜೆ ಹಾಕಿ ಸಂಭ್ರಮಿಸಿದ್ದಾರೆ.
Kshetra Samachara
28/10/2021 06:33 pm