ಉಡುಪಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ತ್ರಿಪುರಾದಲ್ಲಿ ಸರಕಾರಿ ಪ್ರೇರಿತ ಮುಸ್ಲಿಮರ ಮೇಲಿನ ದಾಳಿ ಖಂಡಿಸಿ ಇಂದು ಅಜ್ಜರಕಾಡಿನಲ್ಲಿರುವ ಹುತಾತ್ಮರ ಸ್ಮಾರಕ ಭವನದ ಬಳಿ ಪ್ರತಿಭಟನಾ ಸಭೆ ನಡೆಸಲಾಯಿತು.
ಈ ಸಭೆಯಲ್ಲಿ ಪಾಪ್ಯುಲರ್ ಫ್ರಂಟ್ ಉಡುಪಿ ಜಿಲ್ಲಾ ಅಧ್ಯಕ್ಷ ಫಯಾಜ್ ಅಹ್ಮದ್, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಮುಖಂಡ ಹನೀಫ್ ಮೂಳೂರು ಮಾತನಾಡಿದರು. SDPI ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಖಲೀಲ್, ಪಾಪ್ಯುಲರ್ ಫ್ರಂಟ್ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಶುಕೂರ್ ಮಲ್ಪೆ ಭಾಗವಹಿಸಿದ್ದರು. ಮುಜ್ಜಿತಬ ಕಾಪು ನಿರೂಪಿಸಿ ಶಫೀಕ್ ವಂದಿಸಿದರು.
Kshetra Samachara
29/10/2021 08:02 pm