ಪರ್ಕಳ: ಮಣಿಪಾಲದ ಕಡೆಯಿಂದ ಬರುತ್ತಿದ್ದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿ ಬಿದ್ದ ಘಟನೆ ಪರ್ಕಳದ ಬಳಿ ಸಂಭವಿಸಿದೆ. ಚಾಲಕ ಟಿಪ್ಪರ್ ನಲ್ಲಿ ಪರ್ಕಳ ಕಡೆಗೆ ಮರಳು ಸಾಗಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ಇದೀಗ ಮಣಿಪಾಲ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
Kshetra Samachara
26/03/2022 04:46 pm