ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹಿರಿಯ ಸಸ್ಯವಿಜ್ಞಾನಿ ಡಾ.ಕೆ ಗೋಪಾಲಕೃಷ್ಣ ಭಟ್ ನಿಧನ

ಉಡುಪಿ: ಇಲ್ಲಿನ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರೊಫೆಸರ್, ಹಿರಿಯ ಸಸ್ಯವಿಜ್ಞಾನಿ ಡಾ.ಕೆ ಗೋಪಾಲಕೃಷ್ಣ ಭಟ್ (75 ) ಇಂದು ಮುಂಜಾನೆ ತಮ್ಮ ಚಿಟ್ಪಾಡಿ ಸ್ವಗೃಹದಲ್ಲಿ ನಿಧನರಾದರು.

ಮೂಲತಃ ಕಾಸರಗೋಡು ಜಿಲ್ಲೆಯ ನೀರ್ಚಾಲು ಕಾಕುಂಜೆಯವರಾದ ಮೃತರು 33 ವರ್ಷಗಳ ಕಾಲ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸಸ್ಯ ಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.ಸಸ್ಯ ಶಾಸ್ತ್ರದಲ್ಲಿ ಹಲವಾರು ಅದ್ಯಯನಕ್ಕೆ ಪೂರಕ ಪುಸ್ತಕವನ್ನು ಬರೆದಿರುವರು.

ಇಂದು ಪೂರ್ವಾಹ್ನ ಹನ್ನೊಂದು ಗಂಟೆಗೆ ಬೀಡಿನಗುಡ್ಡೆಯಲ್ಲಿ ಅವರ ಅಂತ್ಯಕ್ರಿಯೆ ಜರುಗಲಿದೆ.ಇವರ ನಿಧನಕ್ಕೆ ಹಳೆ ವಿದ್ಯಾರ್ಥಿ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

Edited By : PublicNext Desk
Kshetra Samachara

Kshetra Samachara

07/04/2022 09:53 am

Cinque Terre

3.4 K

Cinque Terre

0

ಸಂಬಂಧಿತ ಸುದ್ದಿ