ತೆಕ್ಕಟ್ಟೆ:ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನಲೆಯಲ್ಲಿ ಬಿಜೆಪಿ ಯುವಮೋರ್ಚಾ ಕುಂದಾಪುರ ದ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರಾದ ಸಿ ರಾಜ್ ಗೋಪಾಲ್ ಶೆಟ್ಟಿ ಹೊಸಮಠ ಅವರನ್ನು ಸ್ಮರಿಸಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಅವರ ಹಿರಿಯ ಮಗಳು ಜಯಂತಿ ಶೆಟ್ಟಿ ಹೊಸಮಠ ದೊಡ್ಮನೆ ಯವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ,ಯುವಮೋರ್ಚಾ ಕುಂದಾಪುರ ಮಂಡಲ ಅಧ್ಯಕ್ಷ ಅವಿನಾಶ್ ಉಳ್ತೂರು, ಬೀಜಾಡಿ ಮಹಾಶಕ್ತಿಕೇಂದ್ರ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಉಳ್ತೂರು,ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಸುನಿಲ್ ಖಾರ್ವಿ, ಯುವಮೋರ್ಚಾ ಉಪಾಧ್ಯಕ್ಷ ಸುಧೀರ್ ಶೆಟ್ಟಿ ಮಲ್ಯಾಡಿ, ಕೆದೂರು ಶಕ್ತಿ ಕೇಂದ್ರದ ಅಧ್ಯಕ್ಷ ಸುರೇಶ್ ಮೊಗವೀರ ಶಾನಾಡಿ,ದಿನೇಶ್ ಶೆಟ್ಟಿ ಬೆಳಗೋಡು,ಸಂಕೇತ್ ಶೆಟ್ಟಿ ಹೊಸ್ಮಠ,ರೈತ ಮೋರ್ಚಾ ಕಾರ್ಯದರ್ಶಿ ನವೀನ್ ಶೆಟ್ಟಿ ಹಲವರು ಉಪಸ್ಥಿತರಿದ್ದರು.
ಕೆದೂರು ಯುವಮೋರ್ಚಾ ಶಕ್ತಿಕೇಂದ್ರ ಅಧ್ಯಕ್ಷ ಪ್ರತಾಪ್ ಶೆಟ್ಟಿ ಉಳ್ತೂರು ಸ್ವಾಗತಿಸಿದರು.
Kshetra Samachara
21/04/2022 12:14 pm