ಕುಂದಾಪುರ: ನಿನ್ನೆ ಸುರಿದ ಬಾರಿ ಮಳೆಯಿಂದ ಹಾನಿಗೊಳಗಾದ ಬ್ರಹ್ಮಾವರದ ಮನೆಗಳಿಗೆ ಶಾಸಕ ರಘುಪತಿ ಭಟ್ ಭೇಟಿ ನೀಡಿದ್ದಾರೆ.
ಬ್ರಹ್ಮಾವರದ ಕರ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುರ್ಪಡಿಯಲ್ಲಿ ಭಾರಿ ಗಾಳಿ ಮಳೆಯಿಂದ ಅನೇಕ ಮನೆಗಳು ಹಾನಿಗೀಡಾಗಿದ್ದು, ಶಾಸಕ ರಘುಪತಿ ಭಟ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನೆಡೆಸಿದರು. ಹಾನಿಗೀಡಾದ ಮನೆಗೆ ಪ್ರಾಕೃತಿಕ ವಿಕೋಪದಡಿ ಗರಿಷ್ಟ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಗ್ರಾಮ ಲೆಕ್ಕಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
22/04/2022 05:25 pm