ಕುಂದಾಪುರ :ನಗರದಲ್ಲಿ ತಯಾರಾಗುತ್ತಿರುವ ಹೋಳಿಗೆ ಮನೆಗೆ ಭೇಟಿ ನೀಡಿದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಯವರು ಹೋಳಿಗೆ ತಯಾರಿಕೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ಹೋಳಿಗೆಯ ಮಾರುಕಟ್ಟೆಯ ಬಗ್ಗೆ ಸಮಾಲೋಚನೆ ಮಾಡಿ ಸಂಸ್ಥೆಯ ಪ್ರಮುಖರಿಗೆ ಪ್ರೋತ್ಸಾಹ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ ಯವರು ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿಯವರು ಕುಂದಾಪುರ ಬಿಜೆಪಿ ಮಂಡಲದ ಅಧ್ಯಕ್ಷರಾದ ಶಂಕರ ಅಂಕದಕಟ್ಟೆಯವರು ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ , ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು ಉಪಸ್ಥಿತರಿದ್ದರು.
Kshetra Samachara
06/05/2022 11:56 am